mugulu

ad free

ad free

raj vishnu

ಕ್ಷಮೆ ಕೋರಿದ ಕಟ್ಟಪ್ಪ..!! ಬಾಹುಬಲಿ ಜಾತ್ರೆಗೆ ನಡೆಯುತ್ತಾ ಸಿದ್ಧತೆ..?

ಕಾವೇರಿ ವಿಷಯದಲ್ಲಿ 9 ವರ್ಷಗಳ ಹಿಂದೆ ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಕನ್ನಡಿಗರ ವಿರೋಧಕ್ಕೆ ಗುರಿಯಾಗಿದ್ದ ತಮಿಳು ನಟ ಸತ್ಯರಾಜ್ ಕೊನೆಗೂ ಕನ್ನಡಿಗರ ಹೋರಾಟಕ್ಕೆ ತಲೆಬಾಗಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ಭಾರತದ ಬಹುನಿರೀಕ್ಷಿತ ಬಾಹುಬಲಿ 2 ಚಿತ್ರ ಕರ್ನಾಟದಲ್ಲಿ ಬಿಡುಗಡೆಗೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಕನ್ನಡಿಗರನ್ನು ತುಚ್ಛವಾಗಿ ಕಂಡು ಅವಹೇಳನಕಾರಿಯಾಗಿ ಮಾತನಾಡಿದ್ದ ಸತ್ಯರಾಜ್ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಬಾಹುಬಲಿ 2 ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಪರ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿದ್ದವು. ಇದೀಗ ಕನ್ನಡಿಗರ ಹೋರಾಟಕ್ಕೆ ಕಯ ಸಿಕ್ಕಿದೆ ,ಇದಕ್ಕೆ ಮಣಿದಿರುವ ಬಾಹುಬಲಿ ಚಿತ್ರದ ಪಾತ್ರಧಾರಿ ಕಟ್ಟಪ್ಪ ಬಹಿರಂಗವಾಗಿ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ.


ಕಾವೇರಿ ವಿವಾದದ ಸಮಯದಲ್ಲಿ ಅಂದರೆ 9 ವರ್ಷಗಳ ಹಿಂದೆ ಈ ರೀತಿಯ ಹೇಳಿಕೆ ನೀಡಿದ್ದೆ. ಇದರಿಂದ ಕನ್ನಡಿಗರಿಗೆ ನೋವುಂಟು ಮಾಡಿದಕ್ಕೆ ಕ್ಷಮೆ ಇರಲಿ. ನಾನೆಂದಿಗೂ ಕನ್ನಡಿಗರ ವಿರೋಧಿಯಲ್ಲ. ಬಾಹುಬಲಿ 2 ಚಿತ್ರದಲ್ಲಿ ನಾನೊಬ್ಬ ಪಾತ್ರಧಾರಿಯಷ್ಟೇ ಇದರಿಂದ ಚಿತ್ರದ ಬಿಡುಗಡೆಗೆ ತೊಂದರೆಯಾಗುವುದು ಬೇಡ. ಚಿತ್ರದ ಬಿಡುಗಡೆಗೆ ಕನ್ನಡಿಗರು ಅವಕಾಶ ಮಾಡಿಕೊಡಬೇಕು ಎಂದು ತಾನು ಮಾತನಾಡಿರುವ ವಿಡಿಯೋವನ್ನು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಮುಂದೆಯು ತಮಿಳು ನಾಡಿನ ಜನರ ಹಕ್ಕಿಗಾಗಿ ಹೋರಾಟ ಮಾಡುವುದನ್ನು ಮುಂದುವರೆಸುವೆ ಎಂದೂ ಇದರಲ್ಲಿ ಹೇಳಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳಿಂದ ಬಾಹುಬಲಿ ಕರ್ನಾಟಕದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಮುಂದಿನ ವಾರಗಳಲ್ಲಿ ಕನ್ನಡ ಚಿತ್ರಗಳಿಗೆ ಥಿಯೇಟರ್ ಸಮಸ್ಯೆಯಾದರು ಅಚ್ಚರಿ ಪಡಬೇಕಾಗಿಲ್ಲ..!

Rate this item
(0 votes)
Login to post comments

bharjari

ad free

ad free

ಈ ಬಾರಿಯ 'ವೀಕೆಂಡ್ ವಿದ್ ರಮೇಶ್' ಶೋ ನ ನಿಮಗೆ ಅತೀ ಇಷ್ಟವಾದ ಸಂಚಿಕೆ ಯಾರದ್ದು?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top