tarakaasura

ttm

adweb

udgharsha

ಮೈಸೂರಿನಲ್ಲಿ `ಕನಕ' ಬ್ಯುಸಿ:

`ಮೈಲಾರಿ` ಚಂದ್ರು ನಿರ್ದೇಶನ ಹಾಗೂ ನಿರ್ಮಾಣದ `ಕನಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇದೀಗ ಚಿತ್ರತಂಡ ಮೈಸೂರಿನಲ್ಲಿ ಬೀಡು ಬಿಟ್ಟಿದೆ. ಮೈಸೂರಿನ ಸುತ್ತಮುತ್ತ ಚಿತ್ರಕ್ಕೆ ಹದಿನೈದು ದಿನಗಳ ಕಾಲ ಮಾತಿನ ಭಾಗದ ಹಾಗೂ ಹಾಡಿನ ಚಿತ್ರೀಕರಣ ನಡೆಯಲಿದೆ. ದುನಿಯಾ ವಿಜಯ್, ಹರಿಪ್ರಿಯ, ರವಿಶಂಕರ್ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇರುತ್ತದೆ. ಉಳಿದಂತೆ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗುತ್ತದೆ ಎಂದು ನಿರ್ದೇಶಕ ಆರ್.ಚಂದ್ರು ತಿಳಿಸಿದ್ದಾರೆ.

ನಿರ್ದೇಶನದೊಂದಿಗೆ ಚಿತ್ರದ ನಿರ್ಮಾಪಕರೂ ಆಗಿರುವ ಆರ್.ಚಂದ್ರು `ಕನಕ’ ಚಿತ್ರವನ್ನು ಬಹು ತಾರಾಗಣದೊಂದಿಗೆ ಅದ್ದೂರಿಯಾಗಿ ನಿರ್ಮಿಸುತ್ತಿದ್ದಾರೆ. ದುನಿಯಾ ವಿಜಯ್ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಮಾನ್ವಿತ ಹರೀಶ್, ಹರಿಪ್ರಿಯ, ಸಾಧುಕೋಕಿಲ, ರಂಗಾಯಣ ರಘು, ರವಿಶಂಕರ್, ಶ್ರೀನಿವಾಸಮೂರ್ತಿ, ಅಚ್ಯುತರಾವ್, ಪದ್ಮಜಾರಾವ್, ಸುಧಾಬೆಳವಾಡಿ ಮುಂತಾದವರಿದ್ದಾರೆ ತೆಲುಗಿನ ಖ್ಯಾತ ನಟಿ ಸುಧಾ ವಿಜಯ್ ಅವರ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿರ್ದೇಶಕರಾಗಿದ್ದÀ ಯುಗ ಚಂದ್ರು ಈ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದು, ರವಿಶಂಕರ್ ಅವರ ತಮ್ಮನ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಸತ್ಯ ಹೆಗ್ಡೆ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನವೀನ್ ಸಜ್ಜು ಸಂಗೀತ ನೀಡಿದ್ದಾರೆ. ಹರೀಶ್ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ, ಡಿ¥sóÀರೆಂಟ್ ಡ್ಯಾನಿ, ವಿನೋದ್ ಸಾಹಸ ನಿರ್ದೇಶನ ಹಾಗೂ ಮುರಳಿ, ಹರ್ಷ, ಇಮ್ರಾನ್ ಅವರ ನೃತ್ಯ ನಿರ್ದೇಶನ `ಕನಕ’ ಚಿತ್ರಕ್ಕಿದೆ.

Rate this item
(0 votes)
Login to post comments

kismat

aaadi nigif

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top