nata

ttm

adweb

udgharsha

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ `ಗೀತಾ`

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ `ಗೀತಾ’. ಎಸ್.ಎಸ್.ಫಿûಲಂಸ್ ಹಾಗೂ ಗೋಲ್ಡನ್ ಮೂವೀಸ್ ಮೂಲಕ ಸೈಯದ್ ಸಲಾಂ ಹಾಗೂ ಶಿಲ್ಪಾಗಣೇಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿ ಜನಮನಸೂರೆಗೊಂಡ `ಮುಗುಳುನಗೆ’ ಚಿತ್ರ ಇವರ ನಿರ್ಮಾಣದಲ್ಲೇ ಮೂಡಿಬಂದಿತ್ತು.

.

`ಮಿಸ್ಟರ್ & ಮಿಸ್ಸಸ್ ರಾಮಾಚಾರಿ’ ಹಾಗೂ `ರಾಜಕುಮಾರ’ ಚಿತ್ರಗಳಿಗೆ ಸಂತೋಷ್ ಆನಂದರಾಮ್ ಅವರ ಜೊತೆ ಕಾರ್ಯ ನಿರ್ವಹಿಸಿ ಅನುಭವವಿರುವ ವಿಜಯ್ ನಾಗೇಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ.

.

ಜುಲೈ 2 ಗಣೇಶ್ ಅವರ ಹುಟ್ಟಿದ ದಿನಕ್ಕಾಗಿ ಈ ಚಿತ್ರದ ವಿಶೇಷ ಫೋಟೋಶೂಟ್ ಕೂಡ ಮಾಡಲಾಗಿದೆ. ಸೆಪ್ಟಂಬರ್‍ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ನಾಯಕಾರಾಗಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯಿಸುತ್ತಿದ್ದಾರೆ. ಉಳಿದಂತೆ ಈ ಚಿತ್ರದಲ್ಲಿ ಹೆಸರಾಂತ ನಟ - ನಟಿಯರ ತಾರಾಬಳಗವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

.

ವಿ.ಹರಿಕೃಷ್ಣ ಅವರು `ಗೀತಾ’ಗೆ ಸಂಗೀತ ನೀಡುತ್ತಿದ್ದಾರೆ ಹಾಗೂ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಮಾಡುತ್ತಿದ್ದಾರೆ ನಿರ್ದೆಶಕ ವಿಜಯ್ ನಾಗೇಂದ್ರ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ನಾಯಕಿ ಸೇರಿದಂತೆ ಉಳಿದ ಕಲಾವಿದ ಹಾಗೂ ತಂತ್ರಜû್ಞರ ಆಯ್ಕೆ ನಡೆಯುತ್ತಿದೆ.

.

#Cineloka #Geetha

Rate this item
(0 votes)
Login to post comments

kismat

aaadi nigif

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top