tarakaasura

ttm

adweb

udgharsha

ತೆರೆಗೆ ಬರಲು ಸಿದ್ಧವಾಗುತ್ತಿದೆ. ತ್ರಿಭಾಷಾ ಚಿತ್ರ 'ಉದ್ಘರ್ಷ'

ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಚಿತ್ರಗಳಿಗೆ ಹೆಸರುವಾಸಿಯಾದ, ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಬತ್ತಳಿಕೆಯಿಂದ ಮತ್ತೊಂದು ಥ್ರಿಲ್ಲರ್ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ. ಅದುವೇ ಉದ್ಘರ್ಷ. ಕನ್ನಡದ ಮೇರು ನಟರಿಗೆ ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ಸುನಿಲ್ ಕುಮಾರ್ ದೇಸಾಯಿ ಈ ಬಾರಿ ಹೊಸಬ್ಬರಿಗಾಗಿ ಚಿತ್ರ ಮಾಡಿದ್ದು, ಕನ್ನಡ, ತೆಲುಗು, ಹಿಂದಿ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟ ಠಾಕೂರ್ ಅನುಪ್ ಸಿಂಗ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ನಟ ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಚಿತ್ರವೊಂದರಲ್ಲಿ ಖಳನಾಯಕನ ಪಾತ್ರವನ್ನು ಮಾಡುತ್ತಿದ್ದಾರೆ.

ಕಬಾಲಿ ಖ್ಯಾತಿಯ ನಟಿ ಧನ್ಸಿಕ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದಲ್ಲಿ ಮತ್ತೊಬ್ಬ ನಾಯಕಿ ತಾನ್ಯ ಹಾಪ್ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಸಂಜಯ್ ಚೌದ್ರಿ, ಚಿತ್ರಕ್ಕೆ ಸಂಗೀತ ನೀಡಿದ್ದು, ರಾಜನ್ ಮತ್ತು ವಿಷ್ಣುವರ್ಧನ್ ಛಾಯಾಗ್ರಹಣ, ರವಿವರ್ಮರ ಸಾಹಸ ಮತ್ತು ಬಿ.ಎಸ್. ಕೆಂಪರಾಜು ಅವರ ಸಂಕಲನ ಚಿತ್ರಕ್ಕಿದೆ. ಚಿತ್ರವು ಅತೀ ಶೀಘ್ರದಲ್ಲಿ ಕನ್ನಡ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ನಿಷ್ಕರ್ಷ, ಬೆಳಂದಿಗಳ ಬಾಲೆ, ಮರ್ಮ ಮುಂತಾದ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ  ಸುನಿಲ್ ಕುಮಾರ್ ದೇಸಾಯಿವರ ಉದ್ಘರ್ಷ ಚಿತ್ರ ಸಹಜವಾಗಿಯೇ ಕುತೂಹಲ ಕೆರಳಿಸಿದೆ.

Rate this item
(0 votes)
Login to post comments

kismat

aaadi nigif

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top