nata

ttm

adweb

udgharsha

ಕ್ರಿಸ್ಟಲ್ ಪಾರ್ಕ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಅವರು ನಿರ್ಮಿಸುತ್ತಿರುವ `ಗುಬ್ಬಿ ಮೇಲೆ ಬ್ರಹ್ಮಾಸ್ತ್ರ` ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ರಾಜರಾಜೇಶ್ವರಿ ನಗರದ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಟ ನೀನಾಸಂ ಸತೀಶ್ ಆರಂಭ ಫಲಕ ತೋರಿದರು. ಜುಲೈ ತಿಂಗಳಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು ಸುತ್ತಮುತ್ತ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.
.
`ಚಮಕ್`, `ಬೀರಬಲ್`, `ಅಯೋಗ್ಯ` ಹಾಗೂ `ಜಾನ್ ಸೀನ` ಚಿತ್ರಗಳ ನಂತರ ಟಿ.ಆರ್. ಚಂದ್ರಶೇಖರ್ ಅವರು ನಿರ್ಮಿಸುತ್ತಿರುವ ಐದನೇ ಚಿತ್ರ `ಗುಬ್ಬಿ ಮೇಲೆ ಬ್ರಹ್ಮಾಸ್ತ್ರ`. ಈ ಚಿತ್ರವನ್ನು ಸುಜಯ್ ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ. ಪ್ರದೀಪ್ ಬಿ.ವಿ ಹಾಗೂ ಸುಜಯ್ ಚಿತ್ರಕ್ಕೆ ಕಥೆ ಬರೆದೆರೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ವಿ.ಎಂ ಬರೆದಿದ್ದಾರೆ. ಸುನಿತ್ ಹಲಗೇರಿ ಛಾಯಾಗ್ರಹಣ ಹಾಗೂ ಎಸ್. ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ.
.
`ಒಂದು ಮೊಟ್ಟೆಯ ಕಥೆ` ಖ್ಯಾತಿಯ ರಾಜ್ ಶೆಟ್ಟಿ ಈ ಚಿತ್ರದ ನಾಯಕ. ಕವಿತಾ ಗೌಡ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಮೂಲತಃ ರಂಗಬೂಮಿ ಕಲಾವಿದರು ಹಾಗೂ ಈ ಚಿತ್ರದ ನಿರ್ದೇಶಕರು ಆಗಿರುವ ಸುಜಯ್ ಶಾಸ್ತ್ರಿ ಅಭಿನಯಿಸುತ್ತಿದ್ದಾರೆ. ಬಾಲಾಜಿ ಮನೋಹರ್ ಸೇರಿದಂತೆ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ.
.
#GubbiMeleBramhastra #Cineloka

kismat

aaadi nigif

ad free

ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ರಾಜಕೀಯದಲ್ಲಿ ಯಾವ ಪಕ್ಷ ಸೇರಬೇಕು.?
  • Votes: (0%)
  • Votes: (0%)
  • Votes: (0%)
  • Votes: (0%)
  • Votes: (0%)
Total Votes:
First Vote:
Last Vote:
Go to top