ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸುತ್ತಿರುವ `ವೀಕೆಂಡ್` ಚಿತ್ರಕ್ಕೆ ಸೆನ್ಸಾರ್ ಮುಗಿದಿದ್ದು, ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಪಡೆದಿದೆ.
.
ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆಯಿದೆ.

WhatsApp Image 2019 03 14 at 10.47.12 PM
.
ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶ ಹಾಗೂ ಒಂದು ಚೇಸಿಂಗ್ ದೃಶ್ಯವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
.
ಮಿಲಿಂದ್ ಅವರು ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


Leave a Reply