ಕನ್ನಡದ ಮೇರುನಟ ರೆಬೆಲ್ ಸ್ಟಾರ್ ಅಂಬರೀಶ್ ಇನ್ನು ನೆನಪು ಮಾತ್ರ. ಅವರ ಅಭಿಮಾನಿಗಳ ಸೃತಿಪಟಲದಲ್ಲಿ `ಅಂಬಿ ನಿಂಗೆ ವಯಸಾಯ್ತೋ’ ಪೂರ್ಣಪ್ರಮಾಣದ ನಾಯಕನಟರಾಗಿ ನಟಿಸಿದ ಕೊನೆಯ ಚಿತ್ರವಾಗಿ ಉಳಿದುಕೊಂಡಿದೆ. ಅನಾರೋಗ್ಯ ಕಾಡುತ್ತಿದ್ದರೂ ಅದರ ಸುಳಿವೂ ಸಿಗದಂತೆ ಅಂಬಿ ಈ ಚಿತ್ರದ ಪಾತ್ರಕ್ಕೆ ಜೀವ ತುಂಬಿದ್ದರು. ಇದೀಗ ಈ ಚಿತ್ರವನ್ನು ವಿದೇಶಗಳಲ್ಲಿ ಮತ್ತೆ ಬಿಡುಗಡೆ ಮಾಡಬೇಕೆಂದು ಅಲ್ಲಿನ ಅಂಬಿ ಅಭಿಮಾನಿಗಳು ಒತ್ತಾಯಿಸಿದ್ದಾರೆ. ನಿರ್ಮಾಪಕ ಜಾಕ್ ಮಂಜು ಅದಕ್ಕೆ ಮಣಿದು ಮರು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.
.

`ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಮೂಲಕವೇ ವಿದೇಶದಲ್ಲಿರೋ ಕನ್ನಡಿಗರಿಗೆ ಕರ್ಣನನ್ನು ಕಣ್ತುಂಬಿಕೊಳ್ಳುವ ಅವಕಾಶ ಮಾಡಿಕೊಡಲು ಜಾಕ್ ಮಂಜು ಮುಂದಾಗಿದ್ದಾರೆ. ಈ ಮೂಲಕವೇ ಅಂಬರೀಶ್ ಅವರು ಬದುಕಿದ ರೀತಿಯನ್ನು ಗೌರವಿಸುವ, ಅವರ ಆದರ್ಶಗಳನ್ನು ಪರಿಪಾಲಿಸುವ ನಿರ್ಧಾರವೊಂದನ್ನೂ ಜಾಕ್ ಮಂಜು ಪ್ರಕಟಿಸಿದ್ದಾರೆ.
.
ವಿದೇಶಗಳಲ್ಲಿ ಅಂಬಿ ನಿಂಗೆ ವಯಸಾಯ್ತೋ ಬಿಡುಗಡೆಯಿಂದ ಬಂದ ಹಣವನ್ನು ಬಡವರ ಕಲ್ಯಾಣಕ್ಕಾಗಿ ವಿನಿಯೋಗಿಸಲು ತೀರ್ಮಾನಿಸಲಾಗಿದೆ. ಜೀವನದುದ್ದಕ್ಕೂ ಕೊಡುಗೈ ದಾನಕ್ಕೆ ಹೆಸರಾಗಿದ್ದ ಅಂಬರೀಶ್ ಅವರ ಆದರ್ಶಗಳನ್ನು ಪಾಲಿಸುತ್ತಿರುವ ನಿರ್ಮಾಪಕರ ಕಾರ್ಯ ನಿಜಕ್ಕೂ ಶ್ಲಾಘನೀಯ.


Leave a Reply