ಸೆಂಚುರಿಯತ್ತ ಮುನ್ನುಗ್ಗುತ್ತಿರುವ ‘ಯಜಮಾನ’ ಚಿತ್ರದ ಟೈಟಲ್ ಸಾಂಗ್ ರಿಲೀಸ್

 ಸೆಂಚುರಿಯತ್ತ ಮುನ್ನುಗ್ಗುತ್ತಿರುವ ‘ಯಜಮಾನ’ ಚಿತ್ರದ ಟೈಟಲ್ ಸಾಂಗ್ ರಿಲೀಸ್

ಜಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಭರ್ಜರಿ ಸದ್ದು ಮಾಡುತ್ತಿರುವ ಚಿತ್ರ. ಸಿನಿಮಾ ರಿಲೀಸ್ ಆಗಿ ಸದ್ಯ ಸೆಂಚುರಿಯತ್ತ ಮುನ್ನುತ್ತಿದೆ. ಈ ಸಂಭ್ರಮದಲ್ಲಿ ಚಿತ್ರತಂಡ ಚಿತ್ರದ ಟೈಟಲ್ ಸಾಂಗ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. ಹೌದು, ಚಿತ್ರದ ಮೋಸ್ಟ್ ಇಂಟ್ರಸ್ಟಿಂಗ್ ಮತ್ತು ಅಭಿಮಾನಿಗಳ ನೆಚ್ಚಿನ ಹಾಡಾಗಿರುವ ‘ನಿಂತ ನೋಡು ಯಜಮಾನ’ ಹಾಡಿನ ವೀಡಿಯೋ ಸಾಂಗ್ ಅನ್ನು ರಿಲೀಸ್ ಮಾಡಿದೆ. ಈ ಹಾಡನ್ನು ಚಿತ್ರಮಂದಿರಗಳಲ್ಲಿ ಮಾತ್ರ ನೋಡಿದ ಅಭಿಮಾನಿಗಳೀಗ ಡಿ ಬೀಟ್ಸ್ ಅಫಿಶಿಯಲ್ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸುವ ಮೂಲಕ ನೆಚ್ಚಿನ ನಟ ದರ್ಶನನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದು.


ಅಂದ್ಹಾಗೆ ‘ಯಜಮಾನ’ ಚಿತ್ರಕ್ಕೆ ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಸಂಗೀತಾ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಹಿತ್ಯ ಮತ್ತು ವಿಜಯ್ ಪ್ರಕಾಶ್ ದ್ವನಿ ಈ ಹಾಡನ್ನು ಮತ್ತಷ್ಟು ಸುಂದರವಾಗಿ ಮೂಡಿ ಬರಲು ಕಾರಣವಾಗಿದೆ. “ಜಯಮಾನ ಚಿತ್ರದ ಟೈಟಲ್ ಟ್ರ್ಯಾಕ್ ನಿಮಗಾಗಿ” ಎಂದು ಚಾಲೆಂಜಿಂಗ್ ಸ್ಟಾರ್ ಟ್ವೀಟ್ ಮಾಡಿದ್ದಾರೆ.

ಯಜಮಾನ’ ಚಿತ್ರ ಮಾರ್ಚ್ 1 ಕ್ಕೆ ರಿಲೀಸ್ ಆಗಿದೆ. ಸದ್ಯ 85 ದಿನಗಳನ್ನು ಪೂರೈಸಿ ಶತಕದತ್ತ ಮುನ್ನುಗ್ಗುತ್ತಿದೆ. ಚಿತ್ರಕ್ಕೆ ವಿ ಹರಿಕೃಷ್ಣ ಮತ್ತು ಕುಮರನ್ ಆಕ್ಷನ್ ಕಟ್ ಹೇಳಿದ್ದಾರೆ. ನಾಯಕಿಯಾಗಿ ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್ ಕಾಣಿಸಿಕೊಂಡಿದ್ದಾರೆ.


Digiqole ad

Nithyanand Amin

Leave a Reply