ಸಂದೇಶ್ ಪ್ರೊಡಕ್ಷನ್ಸ್ ಹೊಸ ಚಿತ್ರಕ್ಕೆ ಶಿವಣ್ಣ ನಾಯಕ

 ಸಂದೇಶ್ ಪ್ರೊಡಕ್ಷನ್ಸ್ ಹೊಸ ಚಿತ್ರಕ್ಕೆ ಶಿವಣ್ಣ ನಾಯಕ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ.


ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ.

ಗುರುದತ್ ಹಾಗೂ ಶಿವರಾಜಕುಮಾರ್ ಅವರು ಆತ್ಮೀಯ ಸ್ನೇಹಿತರು ಹೌದು. ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು ಎಂದು ನಿರ್ಮಾಪಕ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.


Digiqole ad

Sunil H C

Leave a Reply